ಅಜೆಕಾರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಪೋಸ್ಟರ್ ಹಂಚಿಕೊಳ್ಳುವವರ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಸದ್ಯ ಇಂತಹದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ರತ್ನಾಕರ್ ಅಮೀನ್ ಎಂಬವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಅವರನ್ನು ಬಂಧಿಸಿದ್ದಾರೆ.
ಅಜೆಕಾರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

