Breaking
22 Mar 2026, Sun

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ : ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಎಚ್ಚರಿಕೆ

ಮಂಗಳೂರು: ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ ಸುಮಾರು 10 ವರ್ಷಗಳ ಕೊಲೆ ಪ್ರಕರಣಗಳನ್ನು ವಿಶ್ಲೇಷಣೆ ಮಾಡಿದಾಗ ಕೊಲೆ ಆರೋಪಿಗಳು ಮತೀಯ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವುದು ಕಂಡು ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ ಕಾರ್ಯಚಟುಟಿಕೆಗಳ ಬಗ್ಗೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅವರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ.

ಜಿಲ್ಲೆಯ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *