Breaking
24 Sep 2026, Thu

ಉಜಿರೆಯ ಅನುಗ್ರಹ ಕಾಲೇಜಿನಲ್ಲಿ ಪ್ರಾರಂಭೋತ್ಸವ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟನೆಯು ಜೂನ್ 2 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೋರವರು ದೀಪ ಬೆಳಗಿಸಿ ಉದ್ಘಾಟಿಸಿ ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವವಿಕಸನಕ್ಕೆ ಪೂರಕವಾದ ವಾತವರಣ ಕಾಲೇಜಿನಲ್ಲಿ ಲಭಿಸುತ್ತದೆ.

ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ!ಫಾ! ವಿಜಯ್ ಲೋಬೋ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಹಾಗು ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ನೈತಿಕ ಹಾಗೂ ಮಾಲ್ಯಾಧಿರಿತ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣಗೋಳಿಸುತ್ತದೆ ಎಂದು ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿಗೆ ದಾಖಲಾತಿ ಪಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನಾಗೀತೆಯೊಂದಿಗೆ ಪ್ರಾರಂಭಗೊಂಡಿತು. ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *