ಉಳ್ಳಾಲ: ಕಂಟೈನರ್ ಲಾರಿಯಲ್ಲಿ 24 ದನಗಳನ್ನು ಕಳ್ಳತನ ಮಾಡಿ , ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಜೂನ್ 1 ರಂದು ನಡೆದಿದೆ.

ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಬಂದ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪಿಎಸ್ ಐ. ಶರಣಪ್ಪ ಭಂಡಾರಿ ತಲಪಾಡಿ ಟೋಲ್ ಗೇಟ್ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದನಗಳನ್ನು ಕೇರಳದಿಂದ ಕಳವುಗೈದು ಸಾಗಿಸುತ್ತಿರುವುದಾಗಿ ಆರೋಪಿ ತಿಳಿಸಿದ್ದಾನೆ.

ಆರೋಪಿಯನ್ನು ಉತ್ತರ ಪ್ರದೇಶ ಚಾಲಕ ಮುಜಾಫರ್ ನಗರದ ಆಸಿಫ್ (25) ಎಂದು ಗುರುತಿಸಲಾಗಿದೆ. ಮತ್ತೊರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
