Breaking
22 Mar 2026, Sun

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಒಟ್ಟು 36 ಮಂದಿಯ ಗಡಿಪಾರು ಪಟ್ಟಿ ರೆಡಿ

ದಕ್ಷಿಣ ಕನ್ನಡ : ಕೋಮ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣೆ ಕೊಲೆಗಳ ಬಳಿಕ ಶಾಂತಿಯನ್ನು ಕಾಪಾಡುವುದು ರಾಜ್ಯ ಸರಕಾರ ಮತ್ತು ಸವಾಲಾಗಿ ಪರಿಣಮಿಸಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶಾಂತಿಯನ್ನು ಹೊಸದಾಗಿ ಅಧಿಕಾರ ಸ್ವೀಕರಿಸಿದ ಇಬ್ಬರು ಐಪಿಎಸ್ ಅಧಿಕಾರಿಗಳು ಪಣತೊಟ್ಟಿದ್ದಾರೆ. ಅದರಂತೆ ಅಪರಾಧ ಕೃತ್ಯ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸೇರಿಕೊಂಡಿರುವ ವ್ಯಕ್ತಿಗಳ ಲಿಸ್ಟ್ ತಯಾರಿಸಿ ಅವರ ಗಡಿಪಾರು ಮಾಡಲು ಮುಂದಿನ ಕ್ರಮಕೈಗೊಳ್ಳಲಾಗಿದೆ.

ಸದ್ಯ ಪೊಲೀಸರು ಬಿಡುಗಡೆ ಮಾಡಿರುವ ಈ ಲಿಸ್ಟ್ ವೊಂದು ಇಡೀ ಜಿಲ್ಲೆಯಲ್ಲಿ ಸುದ್ದಿಗೆ ಗ್ರಾಸವಾಗಿದೆ.ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಪೊಲೀಸ್ ಲಿಸ್ಟ್ ರೆಡಿಯಾಗಿದೆ.

ರೌಡಿ ಹಿನ್ನೆಲೆಯಿರುವ ವ್ಯಕ್ತಿಗಳು, ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಪ್ರಬಲ ಹಿಂದುತ್ವ ಹೋರಾಟಗಾರ ಅರುಣ್ ಪುತ್ತಿಲ ಸೇರಿದಂತೆ ಬಂಟ್ವಾಳ, ಪುತ್ತೂರು ವ್ಯಾಪ್ತಿಯ 36 ಮಂದಿಯನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಂಡಿದ್ದಾರೆ.

ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ ಬೆಳ್ಳಾರೆ ವಿಟ್ಲ ಠಾಣೆ ವ್ಯಾಪ್ತಿಯ ಹಳೆ ಪ್ರಕರಣಗಳಲ್ಲಿರುವ ಹಿಂದು ಮತ್ತು ಮುಸ್ಲಿಂ ಸಂಘಟನೆ ಕಾರ್ಯಕರ್ತರು, ಬಿಜೆಪಿಯಲ್ಲಿ ಗುರುತಿಸಿಕೊಂಡವರ ಪಟ್ಟಿಯನ್ನು ರೆಡಿ ಮಾಡಲಾಗಿದ್ದು, ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಪಟ್ಟಿಯಲ್ಲಿ ಒಟ್ಟು 36 ಮಂದಿ ಇದ್ದರೆ, ಈ ಪೈಕಿ 15 ಮುಸ್ಲಿಮರಿದ್ದಾರೆ.

ವಿಶ್ವ ಹಿಂದೂ ಪರಿಷತ್ ಮುಖಂಡ ಭರತ್ ಕುಮ್ಡೇಲು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವರ ಹೆಸರು ಈ ಪಟ್ಟಿಯಲ್ಲಿದೆ. ಗಡಿಪಾರಿಗೆ ಪೊಲೀಸರು ಸಿದ್ಧಪಡಿಸಿದ ಪಟ್ಟಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಸಹಾಯಕ ಆಯುಕ್ತರ ಮೂಲಕ ಈಗಾಗಲೇ ಪಟ್ಟಿಯಲ್ಲಿರುವವರಿಗೆ ನೋಟೀಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *