Breaking
22 Mar 2026, Sun

ಬೆಳ್ತಂಗಡಿಯಲ್ಲಿ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಆರೋಪಿಗಳ ಸ್ಥಳ ಮಹಜರು

ಬೆಳ್ತಂಗಡಿ: ಬಂಟ್ವಾಳದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬೆಳ್ತಂಗಡಿಯ ತಾಲೂಕಿನ 4 ಸ್ಥಳಗಳಿಗೆ ಕರೆತಂದು ಸೋಮವಾರ ಸಂಜೆಯ ವೇಳೆ ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ(27) ಎಂಬವರು ಬಂಧಿತ ಆರೋಪಿಗಳು

ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಉಜಿರೆಯ ನಿಡಿಗಲ್ ನದಿಯ ಬಳಿ ಕರೆತಂದು ಸ್ಥಳ ಮಹಜರು ಮಾಡಲಾಗಿದೆ.

ಮೇ. 27 ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರನ್ನು ಕೊಲೆ ಮಾಡಿ ಮತ್ತೋರ್ವ ಯುವಕ ಕಲಂದರ್ ಶಾಫಿ ಕೊಲೆಗೆ ಯತ್ನಿಸಲಾಗಿತ್ತು.

Leave a Reply

Your email address will not be published. Required fields are marked *