Breaking
22 Mar 2026, Sun

ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್: ಶಾಸಕ ಅಶೋಕ್ ರೈ ವಿರುದ್ಧ ರೊಚ್ಚಿಗೆದ್ದ ಕಾರ್ಯಕರ್ತ ಹಕೀಂ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ರೊಚ್ಚಿಗೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಡಿಪಾರು ಮಾಡುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರ ಹೆಸರು ಕೂಡ ಬಂದಿದ್ದು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ.ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು ಮಾಡುತ್ತೇವೆಂದು ಪುತ್ತೂರು ನಗರ ಠಾಣೆಯ ಇನ್ಸ್ ಪೆಕ್ಟರ್ ಈ ಹಿಂದೆ ಹೇಳಿದ್ರು.

ಇದೀಗ ಯಾವುದೇ ಗುಂಪು ಗಲಭೆ, ಕೋಮುಗಲಭೆ, ಹಲ್ಲೆ, ಹತ್ಯೆ, ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಗಳಲ್ಲಿದ ನನ್ನನ್ನು ಯಾಕೆ ಗಡಿಪಾರು ಮಾಡಬಾರದೆಂಬ ನೋಟೀಸ್ ನೀಡಿದ್ದಾರೆ. ಇದರ ಹಿಂದೆ ಶಾಸಕ ಅಶೋಕ್ರೈ ಅವರ ಕೈವಾಡವಿದೆ. ಮುಸಲ್ಮಾನರ ಮತ ಪಡೆದು ಗೆದ್ದಿರುವ ಅಶೋಕ್ ರೈ ಮುಸಲ್ಮಾನರಿಗೆಯೇ ಅನ್ಯಾಯ ಮಾಡ್ತಾ ಇದ್ದಾರೆ.

ಇನ್ನು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದಾಗ ಕೊಲೆಯಾದ ಅಬ್ದುಲ್ ರಹಿಮಾನ್ ಮನೆಗೆ ಹೋಗಬೇಕಾಗುತ್ತದೆ ಅಂತ ಗೈರಾಗಿದ್ದರು. ಸಾಂತ್ವನ ಹೇಳಲು ಹೋದ್ರೆ ನನಗೆ ಹಿಂದೂಗಳ ಮತ ಸಿಗಲ್ಲ ಎಂಬುದು ಅವರ ಮನಸ್ಸಲ್ಲಿದೆ.

ಅಶೋಕ್ ರೈಗಳೇ ನೀವು ನನ್ನ ಬೆವರಿನಿಂದ ಶಾಸಕರಾಗಿದ್ದೀರಿ. ಮುಂದಿನ ಬಾರಿ ನಿಮ್ಮನ್ನ ನಾನು ಮಾಜಿ ಶಾಸಕನಾಗಿ ಮಾಡ್ತೇನೆ. ನೀವು ಒಂದು ಗ್ರಾಮ ಪಂಚಾಯತ್ ಚುನವಣೆಯಲ್ಲೂ ನಿಂತ್ರೂ ಸೋಲಿಸ್ತೇನೆ. ನಿಜವಾಗಿ ಹಕೀಂ ಕೂರ್ನಡ್ಕನನ್ನ ಗಡಿಪಾರು ಮಾಡುವ ಮೊದಲು ಅಶೋಕ್ ರೈ ಅವರನ್ನ ಗಡಿಪಾರು ಮಾಡಬೇಕು.

ಅಶೋಕ್ ರೈ ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್ ಹಿಡಿದು ಜನರನ್ನ ಬೆದರಿಸಿದವರು. ಅಶೋಕ್ ರೈಗಳ ಜೊತೆ ಇರೋದು ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಗಳು. ಯಾಕೆ ಅವರನ್ನ ಗಡಿಪಾರು ಮಾಡಿಲ್ಲ. ಪ್ರಜ್ವಲ್ ರೈ, ದೀಕ್ಷಿತ್ ರೈ ಅವರನ್ನ ಗಡಿಪಾರು ಮಾಡಲಿ. ಅಶೋಕ್ ರೈ ಜೊತೆ ಇರುವವರು ಉಪ್ಪಿನಂಗಡಿಯಲ್ಲಿ ತಲ್ವಾರ್ ಕಾಳಗ ಮಾಡಿದವರು. ಅವರ ಮೇಲೆ ಪ್ರಕರಣ ದಾಖಲು ಮಾಡಿದ್ದಾರಾ..? ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *