Breaking
19 Sep 2026, Sat

ಅಕ್ರಮ ಗೋ ಸಾಗಾಟ ಪ್ರಕರಣವನ್ನು ವಿಫಲಗೊಳಿಸಿದ ಬೈಂದೂರು ಠಾಣೆಯ ಪೊಲೀಸರು

ಬೈಂದೂರು: ಅಕ್ರಮ ಗೋ ಸಾಗಾಟ ಪ್ರಕರಣವನ್ನು ಬೈಂದೂರು ಠಾಣೆಯ ಪೊಲೀಸರು ಬೇಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯಾ ಮೊಹಲ್ಲಾದಲ್ಲಿ ಕಾರ್ಯಾಚರಣೆ ನಡೆಸಿ ಮೊಹಮ್ಮದ್ ಸಾಜಿದ್ ಎಂಬಾತನನ್ನು ಬಂಧನ ಮಾಡಲಾಗಿದೆ.

ಆರೋಪಿಯು ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಗೋಮಾಂಸ ಸಾಗಾಟ ಮತ್ತು ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆ ಈ ಕಾರ್ಯಾಚರಣೆ ನಡೆಸಲಾಗಿತ್ತು.

ಅಧಿಕಾರಿಗಳ ತನಿಖೆಯ ವೇಳೆ ಆರೋಪಿಯು ಮಾಂಸ ವ್ಯಾಪಾರದ ಉದ್ದೇಶದಿಂದ ಅಕ್ರಮವಾಗಿ ನಾಲ್ಕು ಜಾನುವಾರುಗಳನ್ನು ತಂದು ಬಂಧಿಸಿದ್ದ ಅನ್ನುವ ಮಾಹಿತಿ ಲಭ್ಯವಾಗಿದೆ.

ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *