Breaking
2 Jul 2025, Wed

ಮಂಗಳೂರು ವಿವಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಮಂಗಳೂರು: 2018ರಲ್ಲಿ ಮಂಗಳೂರು ವಿವಿಯಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಈ ಪ್ರಕರಣದಲ್ಲಿ ಇದುವರೆಗೆ ತಪ್ಪಿತಸ್ಥರಿಗೆ ಯಾವುದೇ ಶಿಕ್ಷೆಯಾಗಿರಲಿಲ್ಲ.ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಂದು ವಿಚಾರಣೆಗೆ ಹಾಜರಾಗಿದ್ದ ವಿವಿ ಅಧಿಕಾರಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ.

48 ಗಂಟೆಯೊಳಗೆ ಸಂಪೂರ್ಣ ದಾಖಲೆ ನೀಡುವಂತೆ ಸೂಚಿಸಿದೆ ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

ಈ ಪ್ರಕರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳೂರು ಜಿಲ್ಲಾ ಸಂಚಾಲಕ್ ಸುವಿತ್ ಶೆಟ್ಟಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

Leave a Reply

Your email address will not be published. Required fields are marked *