Breaking
19 Sep 2026, Sat

ಬಜ್ಪೆಯಲ್ಲಿ ಗರಗಸ ಮಾದರಿಯ ಮಾರಕಾಸ್ತ್ರ ಪ್ರದರ್ಶಸಿದ್ದ ಆರೋಪಿಗಳು ಅರೆಸ್ಟ್

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಗರಗಸ ಮಾದರಿಯ ಮಾರಕಾಸ್ತ್ರ ಪ್ರದರ್ಶನ ಮಾಡಿದ್ದ ಮೂವರು ಆರೋಪಿಗಳನ್ನು ಬಜ್ಪೆಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊರ್ಕೋಡಿ ಗ್ರಾಮದ ಅಂಬೇಡ್ಕರ್ ಕಾಲನಿ ನಿವಾಸಿಗಳಾದ ಅಶ್ವತ್, ರವಿಶಂಕರ್ ಹಾಗೂ ಓರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧನದ ವೇಳೆ ಆರೋಪಿಗಳಿಂದ ಗರಗಸ ಮಾದರಿಯ ಮಾರಕಾಸ್ತ್ರ, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರ ಪೈಕಿ ಒಬ್ಬಾತ ಅಪ್ರಾಪ್ತ ಎಂದು ತಿಳಿದುಬಂದಿದೆ. ಈ ಮೂವರು ಆರೋಪಿಗಳು ಮಂಗಳೂರಿನ ಬಜ್ಪೆಯ ಪೊರ್ಕೋಡಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಗರಗಸ ಮಾದರಿಯ ಮಾರಕಾಸ್ತ್ರ ಪ್ರದರ್ಶಿಸುತ್ತಾ ಸುತ್ತಾಡುತ್ತಿದ್ದರು.

ಇದರ ವಿಡಿಯೋ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಅದು ವೈರಲ್ ಆಗಿತ್ತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *