Breaking
17 Jul 2026, Fri

ಕಾಪುವಿನ ಮೂಳೂರುನಲ್ಲಿ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಸಾವು

ಉಡುಪಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಮೂಳೂರು ಎಂಬಲ್ಲಿ ಜೂ. 4 ರಂದು ನಡೆದಿದೆ.

ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ. ಸುವರ್ಣ (43) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಅವರು ಮೂಳೂರು ಬಾರ್ನ ಮುಂಭಾಗದಲ್ಲಿ ರಸ್ತೆ ದಾಟಲೆಂದು ಡಿವೈಡರ್ ಮೇಲೆ ನಿಂತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಲಾರಿಯ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಅವರ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಸಾವನ್ನಪಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದು, ಲಾರಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *