ಕುಂದಾಪುರ: ಕಳೆದ ಎರಡು ದಿನಗಳಿಂದ ರೆಡಿಯೋ ಕಾಲರ್ ಆಳವಡಿಸಲಾಗಿರುವ ಒಂಟಿ ಸಲಗವೊಂದು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕಾಣಸಿಕ್ಕಿದ್ದು, ಸಾರ್ವಜನಿಕರಲ್ಲಿ ಆಂತಕ ಹೆಚ್ಚುವಂತೆ ಮಾಡಿದೆ.
ಈ ನಿಟ್ಟಿನಲ್ಲಿ ಇಂದು ಕುಂದಾಪುರ ತಾಲೂಕಿನ ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರೌಢಶಾಲೆಗಳವರೆಗೆ ರಜೆ ಪೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಾತ್ರವಲ್ಲ ನಡೆಯಬೇಕಿದ್ದ ವಾರದ ಸಿದ್ದಾಪುರ ಸಂತೆಯನ್ನು ಮುಂಜಾಗ್ರತಾ ಕ್ರಮವಾಗಿ ರದ್ದು ಮಾಡಲಾಗಿದೆ ಅನ್ನುವ ಮಾಹಿತಿ ಇದೆ.
ರೆಡಿಯೋ ಕಾಲರ್ ಹೊಂದಿದ ಈ ಒಂಟಿ ಸಲಗವು ಮಂಗಳವಾರ ಉಡುಪಿ- ಶಿವಮೊಗ್ಗ ಜಿಲ್ಲೆ ಗಡಿ ಪ್ರದೇಶವಾಗಿರುವ ನಗರ ಅರಣ್ಯ ವ್ಯಾಪ್ತಿಯ ಹುಲಿಕಲ್ ಚೆಕ್ಪೋಸ್ಟ್ ಬಳಿ ಕಾಣಿಸಿಕೊಂಡಿತ್ತು.
ಬಾಳೆಬರೆ ಘಾಟಿಯ ಶ್ರೀಚಂಡಿಕಾಂಬ ದೇವಸ್ಥಾನ ಕೆಳಭಾಗದ ಕಾಡು ಪ್ರದೇಶದಲ್ಲಿ ಸಂಚರಿಸಿರುವ ಈ ಆನೆಯು ಕುಂದಾಪುರ-ಸಿದ್ದಾಪುರ- ಹೊಸಂಗಡಿ-ಹುಲಿಕಲ್ ಘಾಟಿ ಮೂಲಕ ತೀರ್ಥಹಳ್ಳಿ-ಶಿವಮೊಗ್ಗ ಸಂಪರ್ಕದ ರಾಜ್ಯ ಹೆದ್ದಾರಿಯಲ್ಲಿ ಓಡಾಟ ನಡೆಸಿದೆ.
ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ. ಆನೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.



