Breaking
19 Sep 2026, Sat

ಉಡುಪಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಉಡುಪಿ: ಕರಾವಳಿ ಬೈಪಾಸ್ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಿಯಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂನ್ 4ರಂದು ನಡೆದಿದೆ.

ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರಲ್ಲಿ ಅಭಿಷೇಕ ಆಚಾರ್ಯ ಮತ್ತು ಅಭಿಷೇಕ್ ಸೇರಿದಂತೆ ಇತರ ಇಬ್ಬರು ಕಾರಿನಲ್ಲಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಉಡುಪಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *