Breaking
17 Jul 2026, Fri

ಮಂಗಳೂರಿನಲ್ಲಿ ಬಿಜೆಪಿಯಿಂದ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಠೇವಣಿ ಪತ್ರ ಹಸ್ತಾಂತರ

ಮಂಗಳೂರು:ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ಠೇವಣಿ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಹಸ್ತಾಂತರ ಮಾಡಲಾಯಿತು.ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನಾ ಶೆಟ್ಟಿಯವರು ಠೇವಣಿ ಪತ್ರವನ್ನು ಸ್ವೀಕಾರ ಮಾಡಿದರು. ಹತ್ಯೆಯಾದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು 25 ಲಕ್ಷ ರೂಪಾಯಿಯನ್ನು ನೀಡುವ ಬಗ್ಗೆ ಆಶ್ವಾಸನೆ ನೀಡಿದ್ದರು.ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ,ಶಾಸಕರಾದ ಹರೀಶ್ ಪೂಂಜಾ, ರಾಜೇಶ್ ನಾಯ್ಕ, ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *