Breaking
13 May 2026, Wed

ಪುತ್ತೂರು: ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು: ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿದರು.

ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿ ಸರಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರುಮಾರು, ಶಾಂತಿಗೋಡು ಶಕ್ತಿ ಕೇಂದ್ರ ಅಧ್ಯಕ್ಷ ವಿಶ್ವನಾಥ್ ಬಲ್ಯಾಯ, ಬೂತ್ ಅಧ್ಯಕ್ಷರಾದ ವಿನೋದ್ ಕರ್ಪುತಮೂಳೆ, ಮಾಜಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್ ಕೈಂದಾಡಿ, ಅಶೋಕ್ ರೈ ಸೊರಕೆ,ನರಿಮೊಗರು ಗ್ರಾಮಪಂಚಾಯತ್ ಅಧ್ಯಕ್ಷೆ ಹರಿಣಿ ಪಂಜಾಳ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಡಿ, ನಿರ್ದೇಶಕರಾದ ಪ್ರವೀಣ್ ಶೆಟ್ಟಿ, ದೇವಪ್ಪ ಓಲಾಡಿ, ದೇವಪ್ಪ ಪಜಿರೋಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಕುಲಾಲ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *