ಉಪ್ಪಿನಂಗಡಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಉಪ್ಪಿನಂಗಡಿ ಮೂಲದ ಯುವತಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಉದ್ಯಮಿಯಾಗಿರುವ ಉಪ್ಪಿನಂಗಡಿ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾದ ಯುವತಿಯಾಗಿದ್ದಾರೆ.

18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿತ್ತು.
ಈ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಈ ಮೂಲಕ ಇದುವರೆಗೆ ಕಾಲ್ತುಳಿತದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆಯಾಗಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


