Breaking
6 Aug 2026, Thu

ಉಡುಪಿ: ಜೋಳಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸಿಲುಕಿ ಒಂದು ವರ್ಷದ ಮಗು ಸಾವು

ಉಡುಪಿ: ಜೋಳಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸಿಲುಕಿ ಒಂದು ವರ್ಷದ ಮಗು ಉಸಿರು ಚೆಲ್ಲಿದ ಘಟನೆ ಉಡುಪಿಯಲ್ಲಿ ಜೂನ್‌ 06 ಶುಕ್ರವಾರ ಬೆಳಗ್ಗೆ ನಡೆದಿದೆ.

ನಿಟ್ಟೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಗಂಗಾಧರ ಹಾಗೂ ಅವರ ಪತ್ನಿ ಎಂದಿನಂತೆ ಬೆಳಗ್ಗೆ ಮಗುವನ್ನು ಜೋಳಿಗೆಯಲ್ಲಿ ಮಲಗಿಸಿ ಕೆಲಸಕ್ಕೆ ತೆರಳಿದ್ದರು. ಬಳಿಕ ಸುಮಾರು 11.30ಕ್ಕೆ ಮನೆಗೆ ಬಂದು ನೋಡಿದಾಗ ಮಗುವಿನ ಕುತ್ತಿಗೆಗೆ ಜೋಳಿಗೆ ಬಿಗಿದು ಮಗು ನೇತಾಡುತ್ತಿದ್ದ ಸ್ಥಿತಿಯಲ್ಲಿ ಕಂಡು ಬಂದಿದೆ. ತಕ್ಷಣ ಮಗುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *