ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಹಲ್ಲೆಗೆ ಯತ್ನವನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಗುರುವಾರ ತಡರಾತ್ರಿಯ ವೇಳೆ ಈ ಘಟನೆ ನಡೆದಿದ್ದು,ಆಸ್ಪತ್ರೆಯ ಸಿಬ್ಬಂದಿಯಾಗಿರುವ ಪುರಂದರ ಎನ್ನುವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಹಲ್ಲೆಗೆ ಯತ್ನಿಸಿದವರ ವಿರುದ್ಧ ದೂರು ನೀಡಲು ಸಿಬ್ಬಂದಿಗಳು ತೀರ್ಮಾನ ಮಾಡಿದ್ದಾರೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಆಶಾ ಪುತ್ತೂರಾಯ ಹಲ್ಲೆಗೆ ಯತ್ನಿಸಲಾಗಿತ್ತು.

ಪ್ರಕರಣದ ಸಂಬಂಧ ಸ್ಥಳೀಯ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.



