Breaking
22 Mar 2026, Sun

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ: ಹತ್ತಕ್ಕೂ ಅಧಿಕ ಮಂದಿಗೆ ಗಾಯ, ಇಬ್ಬರು ಗಂಭೀರ

ಗುಂಡ್ಯ: ಖಾಸಗಿ ಬಸ್‌ವೊಂದು ಪಲ್ಟಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಜೂ.7 ರಂದು ನಡೆದಿದೆ.

ಇಂದು ನಸುಕಿನ ವೇಳೆ ಈ ಅವಘಡ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಮರ್ಸಿ ಎಂಬ ಹೆಸರಿನ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಗಂಭೀರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಇದೆ.

Leave a Reply

Your email address will not be published. Required fields are marked *