ಬಡಗಬೆಟ್ಟು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಆರೋಪಿ ಪೊಲೀಸ್ ವಶಕ್ಕೆ

ಉಡುಪಿ: ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳೆಯನ್ನು ಬಲವಂತವಾಗಿ ಲಾಡ್ಜಿನಲ್ಲಿರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಜೂ.06ರಂದು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *