Breaking
24 Mar 2026, Tue

ಬೆಳ್ತಂಗಡಿ: ತಾಲೂಕಿನ ಪ್ರವಾಸಿ ತಾಣಗಳ ಪ್ರವೇಶಕ್ಕೆ ಅನುಮತಿ

ಬೆಳ್ತಂಗಡಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಹಿನ್ನಲೆ ಮೇ.31 ರಂದು ತಾಲೂಕಿನ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಜೂ.7 ರಿಂದ ಎಂದಿನಂತೆ ಪ್ರವೇಶ ಮಾಡಲು ಅನುಮತಿ ನೀಡಲಾಗಿದೆ.

ಪ್ರವಾಸಿಗರು ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಎಂದಿನಂತೆ ಪ್ರವೇಶಿಸಲು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯದಿಂದ ಅನುಮತಿ ನೀಡಲಾಗಿದೆ‌.

ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದ ಹಿನ್ನಲೆಯಲ್ಲಿ, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿತ್ತು. ಅಲ್ಲದೆ ಒಳ ಹರಿವು ಕೂಡ ಜಾಸ್ತಿ ಇದ್ದಿದ್ದರಿಂದ ಪ್ರವಾಸಿಗರ ಪ್ರವೇಶವನ್ನು ನಿಷೇದ ಮಾಡಿ ಈ ಹಿಂದೆ ಆದೇಶ ಹೊರಡಿಸಿಲಾಗಿತ್ತು.

Leave a Reply

Your email address will not be published. Required fields are marked *