Breaking
24 Mar 2026, Tue

ಮಂಗಳೂರು: ಅಪರಾಧ ಕೃತ್ಯ ತಡೆಗಟ್ಟಲು ವಸತಿ ಸಮುಚ್ಚಯಗಳ ಮೇಲೆ ಖಾಕಿ ಹದ್ದಿನ ಕಣ್ಣು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲು ಮುಂದಾದ ಪೊಲೀಸರು ಈಗ ವಸತಿ ಸಮುಚ್ಚಯಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ.

ವಸತಿ ಸಮುಚ್ಚಯಗಳಲ್ಲಿ ಕುಳಿತು ಆಪರಾಧ ಕೃತ್ಯಗಳಿಗೆ ಸಂಚು ರೂಪಿಸಿರುವುದು ಈ ಹಿಂದೆಯೂ ವಿವಿಧ ಪ್ರಕರಣಗಳಲ್ಲಿ ವರದಿಯಾಗಿತ್ತು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಬಜಪೆ ಬಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಿದ್ದು, ಹತ್ಯೆಗೆ ಸಂಚು ರೂಪಿಸಿದ್ದರು. ಈ ಬೆನ್ನಲ್ಲೇ ಅಪಾರ್ಟ್‌ಮೆಂಟ್‌ಗಳ ಮೇಲೆ ಪೊಲೀಸರು ನಿಗಾವಹಿಸಿದ್ದಾರೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅಪಾರ್ಟ್‌ಮೆಂಟ್‌ಗಳ ಆಡಳಿತ ಮಂಡಳಿಗಳಿಗೆ ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *