Breaking
19 Sep 2026, Sat

ಉಡುಪಿ: ಕಾರು ಮತ್ತು ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

ಉಡುಪಿ: ಕಾರು ಮತ್ತು ಬೈಕ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಜೂ. 7 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ ಎಂದು ಗುರುತಿಸಲಾಗಿದೆ.

ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಮೊದಲು ಗೂಡ್ಸ್ ವಾಹನವೊಂದಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ ನಲ್ಲಿದ್ದ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *