ಪುತ್ತೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ರವರು ಜೂ. 7ರಂದು ಭೇಟಿ ನೀಡಿದ್ದಾರೆ.
ಈ ವೇಳೆ ಮನೆಯ ಕ್ಷೇಮ ಸಮಾಚಾರವನ್ನು ವಿಚಾರಿಸಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಈ ಸಂದರ್ಭ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಪ್ರಮುಖರಾದ ದಾಮೋದರ ಭಂಡಾರ್ಕರ್, ರೋಷನ್ ರೈ ಬನ್ನೂರು, ಹರಿಪ್ರಸಾದ್ ಶೆಟ್ಟಿ ದೇವಿಪ್ರಸಾದ್ ಶೆಟ್ಟಿ, ನವೀನ್ ಬೆದ್ರಾಳ ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆಯವರು ಜೂನ್.5 ರಂದು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.




