Breaking
24 Mar 2026, Tue

ತೆಂಕುತಿಟ್ಟಿನ ಯಕ್ಷಗಾನ ಮೇಳದ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ಮೇಳದ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ನಿಧನರಾಗಿದ್ದಾರೆ.

ಜೂ.7ರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿದ್ದ ಅವರು 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು.

ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು. ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 1 ಗಂಟೆಗೆ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿಅಂತಿಮ ದರ್ಶನಕ್ಕೆ   ವ್ಯವಸ್ಥೆ ಕಲ್ಪಿಸಲಿದ್ದು, ಮಧ್ಯಾಹ್ನ 1.15 ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಜರುಗಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *