Breaking
24 Mar 2026, Tue

ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ದಕಟ್ಟೆ ಪದ್ಮನಾಭ ಶೆಟ್ಟಿಗಾರ್ ನಿಧನ

ಸಿದ್ದಕಟ್ಟೆ: ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ (70)ಇಂದು ನಿಧನ ಹೊಂದಿದರು.

ಇವರು ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದ ಕಟ್ಟೆ, ಸುರತ್ಕಲ್ ಮತ್ತು ದೀರ್ಘಕಾಲ ಕಟೀಲು ಮೇಳ ಹೀಗೆ ಒಟ್ಟೂ ಸುಮಾರು ಐದು ದಶಕ ಯಕ್ಷಗಾನ ತಿರುಗಾಟ ಮಾಡಿದ್ದರು.

ಮೂಕಾಸುರ, ವಿಜಯ, ದಾರುಕ, ಪಾಪಣ್ಣ, ಬಾಹುಕ ಮೊದಲಾದ ಪೌರಾಣಿಕ ಪಾತ್ರಗಳ ಮೂಲಕ ಕಲಾರಸಿಕರನ್ನು ರಂಜಿಸಿದ್ದರು. ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಪಾತ್ರ ನಿರ್ವಹಣೆ ಬಲ್ಲವರಾಗಿದ್ದರು.

‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯಲ್ಲದೆ ಒಂದು ವಾರದ ಹಿಂದೆ ಯಕ್ಷನಿಧಿ ಸಂಸ್ಥೆಯು ರೂ.50,000 ನಿಧಿಯೊಂದಿಗೆ ನೀಡಿದ ‘ಸುವರ್ಣ ಪುರಸ್ಕಾರ’ಕ್ಕೂ ಭಾಜನರಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *