ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಣ್ಣನ ಹ*ತ್ಯೆಗೆ ಯತ್ನಿಸಿದ ತಮ್ಮ: ಚರಂಡಿಗೆ ಜಿಗಿದ ಅಣ್ಣ

ಕಡಬ: ರೈಲ್ವೇ ಟ್ರ್ಯಾಕ್‌ ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದ್ದು ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜೂ.8 ರ ಸಂಜೆ ನಡೆದಿದೆ.
ಗಾಯಲು ವ್ಯಕ್ತಿಯನ್ನು ಹನುಮಪ್ಪ ಎಂದು ಗುರುತಿಸಲಾಗಿದೆ.
ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಜೂ.8 ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗ ದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.

ರೈಲು ಹೋದ ಬಳಿಕ ಸುಮಾರು 500 ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಹನುಮಪ್ಪನ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ .

ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ ಎನ್ನಲಾಗಿದೆ.ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ.
ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ನಿಂಗಪ್ಪನನ್ನು ವಶಕ್ಕೆ ಪಡೆದಿದ್ದಾರೆ. 
ಈ ಘಟನೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *