Breaking
22 Mar 2026, Sun

ಹಿಂದೂ ಕಾರ್ಯಕರ್ತರ ಬಂಧನ, ಗಡಿಪಾರು ವಿಚಾರ: ಮಂಗಳೂರಿಗೆ ಇಂದು ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಭೇಟಿ

ಮಂಗಳೂರು: ಹಿಂದೂ ಕಾರ್ಯಕರ್ತರ ಬಂಧನ, ಸುಳ್ಳು ಪ್ರಕರಣ ದಾಖಲು, ಗಡೀಪಾರು ಮಾಡುವ ಷಡ್ಯಂತ್ರ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ರಾಜ್ಯ ನಾಯಕರ ನಿಯೋಗವು ಇಂದು (ಜೂ. 9ರಂದು) ಬೆಳಗ್ಗೆ 11 ಗಂಟೆಗೆ ಮಂಗಳೂರಿಗೆ ಭೇಟಿ ನೀಡಲಿದೆ ಎಂದು ರಾಜ್ಯ ಬಿಜೆಪಿ ಘಟಕ ಪ್ರಕಟನೆಯಲ್ಲಿ ತಿಳಿಸಿದೆ.

ವಿಪಕ್ಷ ನಾಯಕ ಆರ್‌.ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್‌ ಕುಮಾರ್‌, ವಿಧಾನಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಎನ್‌. ರವಿಕುಮಾರ್‌, ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮತ್ತಿತರರು ನಿಯೋಗದಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *