Breaking
23 Jun 2025, Mon

ಸುಬ್ರಹ್ಮಣ್ಯದಲ್ಲಿ ಕೊಠಡಿ ವಿಚಾರಕ್ಕೆ ಯುವಕನಿಗೆ ಹಲ್ಲೆ: ವಿಡಿಯೋ ವೈರಲ್

ಸುಬ್ರಹ್ಮಣ್ಯ: ಕೊಠಡಿ ಬಾಡಿಗೆಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಕೃತ್ಯದ ವೀಡಿಯೋ ವೈರಲ್ ಆಗಿದೆ.

ಯುವಕನೋರ್ವ ಕೊಠಡಿಯನ್ನು ವೀಕ್ಷಿಸಿದ ಬಳಿಕ ಅದನ್ನು ಪಡೆಯದೇ ತೆರಳಿದ ಕಾರಣಕ್ಕೆ ಕೊಠಡಿಯನ್ನು ನಿರ್ವಹಿಸುವ ತಂಡ ವಾಗ್ವಾದಕ್ಕಿಳಿದು, ತಂಡದ ಓರ್ವ ಸದಸ್ಯ ಹಲ್ಲೆ ನಡೆಸಿದ್ದಾನೆ.

ಇದೀಗ ಹಲ್ಲೆ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸುಬ್ರಹ್ಮಣ್ಯದಲ್ಲಿ ಕೆಲವೆಡೆ ಹೊರಗಿನವರು ರೂಂಗಳನ್ನು ಲೀಸ್ಗೆ ಪಡೆದುಕೊಂಡು ಯಾತ್ರಿಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದು ಅವರು ಈ ಕೃತ್ಯ ಎಸಗಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ತಂಡದ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *