Breaking
21 Mar 2026, Sat

ಚಿಲ್ಲರೆ ಕೇಳಿದ್ದಕ್ಕೆ ಮೆಡಿಕಲ್ ಶಾಪ್ ಯುವತಿಗೆ ಹಲ್ಲೆ – ಪ್ರಕರಣ ದಾಖಲು

ಕುಂದಾಪುರ : ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿ.

ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ. ಕೊಟ್ಟಳು. ಚಿಲ್ಲರೆ ಇಲ್ಲ, ಕೊಡಿ ಎಂದು ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ.

ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ ಕೇಸು ದಾಖಲಾಗಿದೆ.

ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಘಟನೆ ನಡೆದ ಔಷಧ ಅಂಗಡಿಗೂ ಭೇಟಿ ಮಾಹಿತಿ ಸಂಗ್ರಹಿಸಿದರು.

ಈ ವೇಳೆ ಮಾತನಾಡಿದ ಅವರು , ಘಟನೆ ಕುರಿತಂತೆ ಕುಂದಾಪುರ ಗ್ರಾಮಾಂತರ ಠಾಣೆ ಯಲ್ಲಿ ಕೇಸು ದಾಖಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *