Breaking
25 Sep 2026, Fri

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತಕ್ಕೆ ಬಲಿಯಾದ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರ ವಿತರಣೆ

ಉಡುಪಿ: ಐಪಿಎಲ್ ಕಪ್ ಗೆದ್ದ ಆರ್ ಸಿಬಿಯ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೆಡಿಯಂ ನಲ್ಲಿ ಉಂಟಾದ ಕಾ ಲ್ತುಳಿತಕ್ಕೆ ಬಲಿಯಾಗಿದ್ದ ಹೆಬ್ರಿಯ ಇಂಜಿನಿಯರಿಂಗ್ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ರಾಜ್ಯ ಸರಕಾರದ ಪರಿಹಾರದ ಚೆಕ್ ನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಹಸ್ತಾಂತರಿಸಿದರು.

ಹೆಬ್ರಿ ಇಂದಿರಾ ನಗರದಲ್ಲಿರುವ ಚಿನ್ಮಯಿ ಶೆಟ್ಟಿ ಮನೆಗೆ ತೆರಳಿದ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರ ನೀಡಿದ 25 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.ಈ ವೇಳೆ ಚಿನ್ಮಯಿ ಶೆಟ್ಟಿ ಅವರ ತಂದೆ ತಾಯಿ ಗೆ ಸಾಂತ್ವಾನ ತಿಳಿಸಿದ ಜಿಲ್ಲಾಧಿಕಾರಿಗಳು ಮನೆಯವರ ದುಃಖದಲ್ಲಿ ಸದಾ ಜಿಲ್ಲಾಡಳಿತ ಅವರೊಂದಿಗೆ ಇದೆ. ಯಾವುದೇ ಸಮಸ್ಯೆ ಆದರೂ ನಮ್ಮನ್ನು ಸಂಪರ್ಕಿಸಬಹುದು ಎಂದರು.

ಈ ಸಂದರ್ಭ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎ.ಸಿ. ರಶ್ಮಿ, ಹೆಬ್ರಿ ತಹಸಿಲ್ದಾರ್ ಪ್ರಸಾದ್ ಎಸ್. ಎ., ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ., ಹೆಬ್ರಿ ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಶಂಕರ್ ಸೇರಿಗಾರ್, ಚಿನ್ಮಯ್ ತಾಯಿ ಶಾಂತ ಶೆಟ್ಟಿ, ಸಹೋದರ ಮತ್ತು ಅವರ ಕುಟುಂಬದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *