ಬಂಟ್ವಾಳ: ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇವರ ಗುರುತು ಪತ್ತೆಗೆ ನಾಗರಿಕರು ಸಹಕರಿಸುವಂತೆ ಪೊಲೀಸರು ವಿನಂತಿಸಿಕೊಂಡಿದ್ದಾರೆ.

ಈ ಅಪರಿಚಿತ ವ್ಯಕ್ತಿ ಭಿಕ್ಷೆ ಅಥವಾ ಕೂಲಿ ಕೆಲಸಕ್ಕೆ ಬಂದಿರುವ ಸಾಧ್ಯತೆಯಿದ್ದು, ಅಸೌಖ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಬಂಟ್ವಾಳ ನಗರ ಠಾಣೆ 08255-232111 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ವಿನಂತಿಸಿಕೊಂಡಿದ್ದಾರೆ.



