Breaking
25 Sep 2026, Fri

ಉಜಿರೆ: ವಿದ್ಯುತ್ ಶಾಕ್ ಗೆ ಒಳಪಟ್ಟ ಯುವಕನ ರಕ್ಷಣೆ

ಬೆಳ್ತಂಗಡಿ: ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ಉಜಿರೆ ಟಿ. ಬಿ ಕ್ರಾಸ್ ನಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ಸಾದಿಕ್ ಆಘಾತಕ್ಕೆ ಒಳಪಟ್ಟವನು ಎಂದು ತಿಳಿದು ಬಂದಿದೆ.

ವಾಹನ ತೊಳೆಯುತ್ತಿದ್ದ ಸಂದರ್ಭದಲ್ಲಿ ನೀರು ಹಾಯಿಸುವ ಗನ್ ಮೂಲಕ ಈ ಶಾಕ್ ಹೊಡೆದಿದೆ ಎನ್ನಲಾಗಿದೆ.

ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ವಿದ್ಯುತ್ ಆಘಾತಕ್ಕೆ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸುವ ಕಾರ್ಯ ಮಾಡಿದ್ದು ತಕ್ಷಣವೇ ಆತನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *