ಕುಂದಾಪುರ: ನಾಪತ್ತೆಯಾಗಿದ್ದ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ತನ್ನ ಪ್ರಿಯತಮನ ಜೊತೆ ಪರಾರಿಯಾದ ಘಟನೆ ತಾಲೂಕಿನ ವಿಠಲವಾಡಿಯಲ್ಲಿ ನಡೆದಿದೆ.
ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆ ಯಾಗಿದೆ ಎಂದು ಸುದ್ದಿಯಾಗಿತ್ತು.
ಇದೀಗ ನದಿಗೆ ಹಾರುವ ನಾಟಕವಾಡಿ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ.

ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ.
ಇವರ ಪತಿ ವಿದೇಶದಲ್ಲಿದ್ದು, ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಜೂನ್ 9ರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಬಿಟ್ಟು ನದಿಗೆ ಹಾರಿದ ರೀತಿ ನಾಟಕವಾಡಿ ಹೆಮ್ಮಾಡಿಯ ಹೊಟೇಲ್ ಕಾರ್ಮಿಕ ಸಾಹಿಲ್ (27) ಎಂಬುವನ ಜೊತೆ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಕುಂದಾಪುರ ಪುಡ್ ಮಾರ್ಕ್ ಎಂಬ ಹೋಟೇಲ್ ನಲ್ಲಿ ಯುವಕ ಕೆಲಸ ಮಾಡಿಕೊಂಡಿದ್ದು ಜೂ. 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಮನೆಯಿಂದ ಕುಂದಾಪುರ ಪೇಟೆಗೆ ಹೋಗಿ ಬರುವುದಾಗಿ ಹೇಳಿ ತನ್ನ ಸ್ಕೂಟಿಯಲ್ಲಿ ಹೋದವ ಇದುವರೆಗೆ ಬಾರದೆ ನಾಪತ್ತೆಯಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


