Breaking
25 Sep 2026, Fri

ಅನ್ನಭಾಗ್ಯ ಯೋಜನೆಯ 55 ಕ್ವಿಂಟಾಲ್‌ ಅಕ್ಕಿ ದಾಸ್ತಾನು: ಓರ್ವ ವಶಕ್ಕೆ

ಉಡುಪಿ: ಅನ್ನಭಾಗ್ಯ ಯೋಜನೆಯಡಿಯಲ್ಲಿ ವಿತರಿಸಲಾಗಿರುವ ಉಚಿತ ಅಕ್ಕಿಯನ್ನು ಖರೀದಿಸಿ ದಾಸ್ತಾನು ಮಾಡಿಕೊಂಡಿರುವ ಆರೋಪದಡಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಆರೋಪಿ ಬೊಮ್ಮರಬೆಟ್ಟುವಿನ ವಾಸುದೇವ ಪ್ರಭು (56) ಎಂದು ಗುರುತಿಸಲಾಗಿದೆ.

ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿರುವ ಜನರಲ್‌ ಸ್ಟೋರ್‌ನಲ್ಲಿ ಸುಮಾರು 1,27,880 ರೂ. ಮೌಲ್ಯದ 55 ಕ್ವಿಂಟಾಲ್‌ 60 ಕೆ.ಜಿ ಅಕ್ಕಿಯನ್ನು ದಾಸ್ತಾನು ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಖಚಿತ ಮಾಹಿತಿಯನ್ನು ತಿಳಿದ ಉಡುಪಿಯ ಆಹಾರ ನಿರೀಕ್ಷಕರು ಮತ್ತು ಹಿರಿಯಡಕ ಠಾಣಾ ಪಿಎಸ್‌ಐ ಪುನಿತ್‌ ಕುಮಾರ್‌ ಬಿ.ಇ. ಹಾಗೂ ಸಿಬಂದಿಗಳಾದ ಆದರ್ಶ, ಕಾರ್ತಿಕ್‌ ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿದ್ದಾರೆ.

ಈ ಕುರಿತು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ

Leave a Reply

Your email address will not be published. Required fields are marked *