Breaking
22 Mar 2026, Sun

ಕಡೇಶಿವಾಲಯ: ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಹಾಗೂ ಪೋಷಕರ ಸಭೆ

ಬಂಟ್ವಾಳ: ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಹಾಗೂ ಪೋಷಕರ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮಾತಾನಾಡಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿಗಳನ್ನು ಆರಂಭಿಸಿ ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಮಾಧ್ಯಮ ತರಗತಿಗಳು ಆರಂಭವಾಗಬೇಕು ಎಂದು ಹೇಳಿದರು.

ಅವರು ಮಂಗಳವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ವಹಿಸಿದ್ದರು.

1 ನೇ ತರಗತಿಯಿಂದ 7ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕವನ್ನು ಒದಗಿಸಿ ಪುಸ್ತಕ ವಿತರಣೆ ಮಾಡಿ ಮಾತನಾಡಿದ ಉದ್ಯಮಿ ಶಾಲಾ ಹಿರಿಯ ವಿದ್ಯಾರ್ಥಿ ಸಂಶುದ್ದೀನ್ ಪಟ್ಲ, ಮಾತನಾಡಿ ಶಾಲೆಗೆ ತುರ್ತು ಅಗತ್ಯವಿರುವ ಅಕ್ಷರ ದಾಸೋಹ ಕೊಠಡಿಯ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಲೆಗೆ ಒಂದನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶಾಲಾ ಸಮಸ್ತವನ್ನು. ಮಾಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೇಶವ ಕೆ ಉಚಿತವಾಗಿ ನೀಡ ಪ್ರೋತ್ಸಾಹಿಸಿದರು.ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ ಬನಾರಿ ಸರಕಾರದಿಂದ ಸಿಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಎಲ್ಲರ ಸಹಕಾರ ಪಡೆದು ಶೀಘ್ರವೇ ಅಕ್ಷರ ದಾಸೋಹ ಕೊಠಡಿಯನ್ನು ನಿರ್ಮಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕ್ಯಾಶೂ ಇಂಡಸ್ಟ್ರೀಸ್ ಶೇರಾ ಮಾಲಕರಾದ ಗಂಗಾಧರ ಶೇರಾ, ಶಾಲಾ ಮಾಜಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಚೆನ್ನಪ್ಪ ಅಂಚನ್,ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಚಿದಾನಂದ, ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ಉಷಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಂಗನವಾಡಿ ಶಿಕ್ಷಕಿ ಪುಷ್ಪಾ ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *