ತೀರ್ಥಹಳ್ಳಿ: ಚಿತ್ರೀಕರಣದ ಪ್ರಾರಂಭದಿಂದಲೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾಂತರ ಚಲನಚಿತ್ರಕ್ಕೆ ಮತ್ತೊಂದು ಅಘಾತವಾಗಿದೆ.
ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.

ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.
ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ವಾರಗಳ ಹಿಂದೆ ಇದೇ ಚಿತ್ರದಲ್ಲಿ ನಟಿಸಿದ್ದ ಜಿ ಕನ್ನಡ ಕಾಮಿಡಿ ಕೀಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿದ್ದರು, ಇದೀಗ ಇನ್ನೊರ್ವ ಕಲಾವಿದನ ಸಾವು ಚಿತ್ರ ತಂಡಕ್ಕೆ ಹೊಡೆತ ನೀಡಿದೆ.


