Breaking
26 Mar 2026, Thu

ಬಿ ಸಿ ರೋಡ್: “ತುಳುವೆರೆನ ತುಳುನಾಡ ಸಂತೆ” ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಇದೇ ಬರುವ ಜೂ. 20, 21, 22 ರಂದು ಬಿ.ಸಿ.ರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ “ತುಳುವೆರೆನ ತುಳುನಾಡ ಸಂತೆ” ಮಾವು ಹಲಸುಗಳೊಂದಿಗೆ ಸಾಹಿತ್ಯ ಸಾಂಸ್ಕೃತಿಕ ರಂಗಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಪೂಜೆ ನೆರವೇರಿಸಿ ತುಳುಕೂಟದ ಅಧ್ಯಕ್ಷರಾದ ಸುದರ್ಶನ್ ಜೈನ್ ಆಮಂತ್ರಣ ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ತುಳುಕೂಟ ಬಂಟ್ವಾಳದ ಕಾರ್ಯದರ್ಶಿ ಎಚ್ಕೆ ನಯನಾಡು, ಕೋಶಾದಿಕಾರಿ ಸುಭಾಶ್ಚಂದ್ರ ಜೈನ್, ಉಪಾಧ್ಯಕ್ಷರು ಕೆ.ಸೀತಾರಾಮ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ತ್ ಸದಸ್ಯರಾದ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಸಂಚಸಲಕರಾದ ಸೇಷಪ್ಪ ಮಾಸ್ಟರ್, ಸುಕುಮಾರ್ ಬಂಟ್ವಾಳ, ನಾರಾಯಣ ಸಿ.ಪೆರ್ನೆ, ಪರಮೇಶ್ವರ ಮೂಲ್ಯ, ಮೋಹನ್ ಶೆಟ್ಟಿ ಪಂಜಿಕಲ್ಲು, ಚಂದ್ರಶೇಖರ್ ಗಟ್ಟಿ, ಸತೀಶ್ ಕುಮಾರ್ ಕಾರ್ತಿಕ್, ಸನ್ಮತಿ ಜೆ.ಜೈನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *