ಅಹಮದಾಬಾದ್: ಏರ್ ಇಂಡಿಯಾ ವಿಮಾನವೊಂದು ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ವೇಳೆ ಈ ದುರಂತ ಸಂಭವಿಸಿದ್ದು ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅವಘಡದಲ್ಲಿ ಹಲವಾರು ಸಾವು ನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವಿಮಾನವು ಅಹಮದಾಬಾದ್ನಿಂದ ಲಂಡನ್ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

