Breaking
16 Jul 2026, Thu

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ನೇಮಕ

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರನ್ನು ಜೂ.10ರಂದು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ವರೆಗೆ ಆಯುಕ್ತರಾಗಿದ್ದ ನೂರ್ ಜಹಾನ್ ಖಾನಂ ಅವರನ್ನು ವರ್ಗಾವಣೆ ಮಾಡಲಾಗಿದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿದ್ದ ಮುಹಮ್ಮದ್ ನಝೀರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಸರಕಾರ ಆಯ್ಕೆ ಮಾಡಿದೆ.

ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ನಝೀರ್ ಅವರು ಈ ಹಿಂದೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ, ಸ್ಮಾರ್ಟ್ ಸಿಟಿ ಲಿಮಿಟೆಡ್ನ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *