ಅಹಮದಾಬಾದ್ ನ ವಿಮಾನ ದುರಂತದಲ್ಲಿ 100 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ

ಗುಜರಾತ್ : ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನ ಇದ್ದ ಹೊತ್ತೊಯುತ್ತಿದ್ದ ಏರ್ ಇಂಡಿಯಾ ವಿಮಾನ ಮೇಘನಿ ನಗರದಲ್ಲಿ ಪತನಗೊಂಡಿದ್ದು, 100ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಏರ್ ಇಂಡಿಯಾ ವಿಮಾನವು ಬೋಯಿಂಗ್ 787-8 ಡ್ರೀಮ್ಲೈನರ್ ಅವಳಿ ಜೆಟ್ ಆಗಿದ್ದು ಇದು ಒಟ್ಟು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಹೊತ್ತು ಸಾಗಿತ್ತು.

ಇದರಲ್ಲಿ ಪೈಲಟ್ ಇನ್ ಕಮಾಂಡ್ ಸುಮಿತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ಇದ್ದರು.

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಹೇಳಿಕೆ ಪ್ರಕಾರ, ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲಟ್ ಡ್ರೈವ್ ಕುಂದರ್ ಅವರ ನೇತೃತ್ವದಲ್ಲಿತ್ತು.

ಕ್ಯಾಪ್ಟನ್ ಸುಮೀತ್ ಅವರು 8,200 ಗಂಟೆಗಳ ಅನುಭವ ಹೊಂದಿರುವ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಆಗಿದ್ದರೆ, ಸಹ ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ.

ಇಂದು ಮಧ್ಯಾಹ್ನ 1.39ಕ್ಕೆ ರನ್ವೇ 23ರಿಂದ ವಿಮಾನ ಟೇಕ್ಆಫ್ ಆಗಿತ್ತು. ಕೆಲವೇ ಕ್ಷಣಗಳಲ್ಲಿ ವಾಯು ಸಂಚಾರ ನಿಯಂತ್ರಣ ಘಟಕಕ್ಕೆ ಅಪಾಯದ ಮುನ್ಸೂಚನೆಯಾಗಿ ಪೈಲಟ್ ತುರ್ತು ಕರೆ ಮಾಡಿದ್ದರು.

ಎಟಿಸಿ ವಾಪಸ್ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಬಳಿಕ ವಿಮಾನ ನಿಲ್ದಾಣದ ಪರಿಧಿಯ ಹೊರಭಾಗದಲ್ಲಿ ವಿಮಾನ ಪತನಗೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು ಎಂದು ಡಿಜಿಸಿಎ ತಿಳಿಸಿದೆ.

Leave a Reply

Your email address will not be published. Required fields are marked *