ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.13ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿAಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮಕ್ಕಳ ರಜೆಯ ವಿಚಾರದಲ್ಲಿ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬoಧ ಪಟ್ಟವರಿಗೆ ಹಲವು ಸೂಚನೆಗಳನ್ನು ಜಿಲ್ಲಾಡಳಿತವು ನೀಡಿದ್ದು ಅವುಗಳು ಈ ರೀತಿಯಾಗಿ ಇದೆ.
1.ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವ ಹಾಗಿಲ್ಲ.
2.ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲವೇ ಸುರಕ್ಷಿತವಾಗಿ ತಲುಪುವ ಬಗ್ಗೆ, ಗಮನವಹಿಸಬೇಕು.
3.ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4.ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ.
5.ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದAತೆ ಸೂಕ್ತ ಕ್ರಮವಹಿಸಬೇಕು
.6.ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ನೀರು ಇರುವ ತನ್ನು ಪ್ರದೇಶ, ಕೆರೆ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು7
.ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು ಮುಖ್ಯ ಎಂದು ಜಿಲ್ಲಾಡಳಿತ ಹೇಳಿದೆ.



