ಬಂಟ್ವಾಳ: ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಪೆರಿಯಾಪಾದೆಯಲ್ಲಿ ನಡೆದಿದೆ.
ಮಹಮ್ಮದ್ ಹನೀಫ್ ಅವರ ಅಂಗಡಿಗೆ ಕಳ್ಳರು ನುಗ್ಗಿದ್ದು ಸುಮಾರು 8 ಸಾವಿರ ರೂಪಾಯಿ ನಗದನ್ನು ಕಳವು ಮಾಡಿದ್ದಾರೆ. ಗುರುವಾರ ಬೆಳಗ್ಗೆ ಅಂಗಡಿ ತೆರೆಯಲು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




