ಮಂಗಳೂರು: ಕಾವೂರು ಗಾಂಧಿನಗರ ಜಂಕ್ಷನ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಆರೋಪದಲ್ಲಿ ಯುವಕನೊರ್ವನನ್ನು ಬಂಧಿಸಲಾಗಿದೆ.
ಆರೋಪಿ ಕಾವೂರು ಗಾಂಧಿನಗರ ನಿವಾಸಿ ತ್ರಿಶೂಲ್ ತೇಜಶ್ವಿ ಕೆ.ಪಿ. (26) ಎಂದು ತಿಳಿದುಬಂದಿದೆ.

ಪೊಲೀಸರು ಗಸ್ತಿನಲ್ಲಿದ್ದಾಗ ಆರೋಪಿಯು ಗಾಂಧಿನಗರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದಿದೆ.
ಬಳಿಕ ಆತನನ್ನು ವಶಕ್ಕೆ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಕಾವೂರು ಪೊಲೀಸರು ತಿಳಿಸಿದ್ದಾರೆ.

