Breaking
19 Sep 2026, Sat

ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯಲು ವಿಶೇಷ ಕಾರ್ಯ ಪಡೆಗೆ ಚಾಲನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು: ಜಿಲ್ಲೆಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ.

ಈ ವಿಶೇಷ ಕಾರ್ಯ ಪಡೆಯ ಕಚೇರಿಯು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *