ಕೊಡಗು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಕೊಡಗು ಜಿಲ್ಲೆಯ ಕಾರೇಕೊಪ್ಪ ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ರಾಜ್ಯದ ಗೋಲ್ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(28 ವರ್ಷ) ಎಂಬಾತ ಮಾನಭಂಗಕ್ಕೆ ಯತ್ನಿಸಿರುವ ಆರೋಪವನ್ನು ಎದುರಿಸುತ್ತಿರುವ ವ್ಯಕ್ತಿಯಾಗಿದ್ದಾನೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸೋಮವಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

