Breaking
22 Mar 2026, Sun

ಕುಂದಾಪುರದಲ್ಲಿ ಜೂಜಾಟ ಆಡುತ್ತಿದ್ದ 10 ಮಂದಿಯ ಬಂಧನ, ಮೊಬೈಲ್ ಫೋನ್ ಸೇರಿದಂತೆ ಹಲವು ವಸ್ತುಗಳು ವಶಕ್ಕೆ

ಕುಂದಾಪುರ: ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಬ್ರಹ್ಮಣ್ಯ, ಅಶ್ರಫ್, ಸುನೀಲ್, ಧೀರಜ್, ಶಂಕರ, ಸುಧೀರ್ ಕುಮಾರ್, ಮಧುಕರ, ಮನೋಹರ, ಗಣೇಶ್, ರಾಮ್ ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳು ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಬಂಧಿತ ರಿಂದ 8,810 ರೂ ನಗದು, 10 ಮೊಬೈಲ್ ಫೋನ್, ಜೂಜಾಟ ಆಡಲು ಬಂದಿದ್ದ 3 ಮೋಟಾರು ಸೈಕಲ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

Leave a Reply

Your email address will not be published. Required fields are marked *