ಮಂಗಳೂರು: ಅಗ್ನಿ ಅನಾಹುತ ಸಂಭವಿಸಿ ಎರಡು ಅಂಗಡಿಗಳು ಸೇರಿದಂತೆ ಒಂದು ಗೂಡ್ಸ್ ವಾಹನ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಜೂ.14 ನಡೆದಿದೆ.
ಮುಂಜಾನೆಯ ವೇಳೆ ಈ ಅವಘಡ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಅಂತ ಹೇಳಲಾಗುತ್ತಿದೆ.

ಘಟನೆಯಲ್ಲಿ ಬಟ್ಟೆ ಅಂಗಡಿ ಮತ್ತು ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದ್ದು ಜೊತೆಗೆ ಒಂದು ಗೂಡ್ಸ್ ವಾಹನವೂ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ನಷ್ಟವಾಗಿರುವ ಮಾಹಿತಿ ಲಭ್ಯವಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.



