ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭೂ ಕುಸಿತ ಸಂಭವಿಸಿರುವ ಸಾಧ್ಯತೆ ಇರುವುದರಿಂದ ಜೂ.15 ರಿಂದ ಸೆಪ್ಟೆಂಬರ್ 30 ರವರೆಗೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿಯಿಂದ ತೀರ್ಥಹಳ್ಳಿಗೆ ತೆರಳುವ ಭಾರೀ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವನ್ನು ಉಪಯೋಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಭೀತಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಲಘು ವಾಹನಗಳಿಗೆ ಮಾತ್ರ ಈ ದಾರಿಯಲ್ಲಿ ಸಂಚಾರ ಅನುಮತಿಯನ್ನು ನೀಡಲಾಗಿದೆ.



