Breaking
22 Mar 2026, Sun

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ಮಂಗಳೂರಿಗೆ ಆಗಮಿಸಿದ ಎನ್ಐಎ ಅಧಿಕಾರಿಗಳ ತಂಡ

ಮಂಗಳೂರು: ಕಳೆದ ತಿಂಗಳು ಬಜ್ಪೆಯಲ್ಲಿ ಹತ್ಯೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿದ್ದಾರೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು ಈ ಹಿನ್ನೆಲೆ ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.‌

ಇದೀಗ ಬೆಂಗಳೂರು ಎ‌ನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ.

ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *